ರಾಜಸ್ಥಾನ: ಮೂರನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Prasthutha|

- Advertisement -

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ 19 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಹಾಗೂ ಸಚಿನ್ ಪೈಲಟ್​ ಅವರ ಆಪ್ತರಿಗೂ ಕಾಂಗ್ರೆಸ್​ ಹೈಕಮಾಂಡ್​ ಮಣೆ ಹಾಕಿತ್ತು.

ಮೂರನೇ ಪಟ್ಟಿಯಲ್ಲಿ ಪಕ್ಷೇತರರು ಹಾಗೂ ಬಿಎಸ್​ಪಿ ಶಾಸಕರಿಗೆ ಟಿಕೆಟ್​ ಕೊಡಿಸುವಲ್ಲಿ ಅಶೋಕ್​ ಗೆಹ್ಲೋಟ್ ಯಶಸ್ವಿಯಾಗಿದ್ದಾರೆ. ಇತ್ತೀಚಿಗೆ ಬಿಜೆಪಿ ತೊರದು ಕಾಂಗ್ರೆಸ್​ ಸೇರಿದ ಬಿಜೆಪಿ ಶಾಸಕಿ ಶೋಭಾ ರಾಣಿ ಕುಶ್ವಾಗು ಧೋಲ್ಪುರದಿಂದ ಟಿಕೆಟ್​ ನೀಡಲಾಗಿದೆ. 13 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.

- Advertisement -

ಈ ತನಕ 95 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವ ಕಾಂಗ್ರೆಸ್​ ಉಳಿದ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸುವುದಾಗಿ ತಿಳಿಸಿದೆ.

200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ರಾಜಸ್ಥಾನದಲ್ಲಿ ಮತ್ತೆ ಗೆದ್ದರೆ, ಮನೆ ಯಜಮಾನಿಗೆ ವರ್ಷಕ್ಕೆ 10 ಸಾವಿರ ರೂ. ಕೊಡುವ ಭರವಸೆ ಕಾಂಗ್ರೆಸ್ ನೀಡಿದೆ.