ರಾಜಸ್ಥಾನ: ಕಾಂಗ್ರೆಸ್​ ಶಾಸಕರ ರಾಜೀನಾಮೆ| ಸ್ಪೀಕರ್‌ಗೆ ನೋಟಿಸ್ ನೀಡಿದ ಹೈಕೋರ್ಟ್‌

Prasthutha|

ಜೈಪುರ: ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜಸ್ಥಾನ ಹೈಕೋರ್ಟ್ ವಿಧಾನ ಸಭಾಧ್ಯಕ್ಷರಿಗೆ ನೋಟಿಸ್ ನೀಡಿದೆ.

- Advertisement -

ಕಾಂಗ್ರೆಸ್ ಪಕ್ಷದ 91 ಶಾಸಕರ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳದಿರುವುದರಿಂದ ಈ ನೋಟಿಸ್ ನೀಡಲಾಗಿದೆ.

ಬಿಜೆಪಿ ನಾಯಕ ರಾಜೇಂದ್ರ ರಾಥೋಡ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ(ಪಿಐಎಲ್) ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

- Advertisement -

ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ 91ಕ್ಕೂ ಹೆಚ್ಚು ಶಾಸಕರು ನೀವು ರಾಜಸ್ಥಾನ ಬಿಟ್ಟು ಕೇಂದ್ರಕ್ಕೆ ಹೋದರೆ ನಾವು ರಾಜೀನಾಮೆ ಎಂದು ಹೇಳಿ ಸ್ಪೀಕರ್‌ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು ಎಂದು ರಾಜೇಂದ್ರ ರಾಥೋಡ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್ 25ರಂದು ಕಾಂಗ್ರೆಸ್ ನ 91 ಶಾಸಕರು ವಿಧಾನ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದರು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೂ ಶಾಸಕರು ಸ್ಪೀಕರ್‌ಗೆ ರಾಜೀನಾಮೆ ಸ್ವೀಕರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು ಎಂದು ಪಿಐಎಲ್‌ ಅರ್ಜಿಯಲ್ಲಿ ಹೇಳಲಾಗಿದೆ.

ವಿಧಾನಸಭೆಯ ನಿಯಮ 173ರ ಅಡಿಯಲ್ಲಿ ಸ್ಪೀಕರ್ ರಾಜೀನಾಮೆ ಅಂಗೀಕರಿಸದೇ ಬೇರೆ ದಾರಿಯಿಲ್ಲ, ಅವರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ರಾಜೇಂದ್ರ ರಾಥೋಡ್ ಅರ್ಜಿಯಲ್ಲಿ ಹೇಳಿದ್ದಾರೆ.

Join Whatsapp