7 ವಿಕೆಟ್‌ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದ ರಾಜಸ್ಥಾನ್ ರಾಯಲ್ಸ್

Prasthutha|

ನವದೆಹಲಿ: ನಾಯಕ ಸಂಜು ಸ್ಯಾಮ್ಸನ್ ಮತ್ತು ಧ್ರುವ ಜುರೆಲ್ ಜೊತೆಯಾಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 7 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಐಪಿಎಲ್ ಟಿ-20 ಟೂರ್ನಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ

- Advertisement -

ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 6 ವಿಕೆಟ್‌ಗೆ 196 ರನ್ ಗೆ ನಿಯಂತ್ರಿಸಿದ ರಾಜಸ್ಥಾನ್ ರಾಯಲ್ಸ್ 1 ಓವರ್ ಬಾಕಿ ಇರುವಾಗಲೇ 3 ವಿಕೆಟ್ ಕಳೆದುಕೊಂಡು ವಿಜಯದ ನಗೆ ನಕ್ಕಿತು.

ರಾಜಸ್ಥಾನ್ ರಾಯಲ್ಸ್ 9 ಪಂದ್ಯಗಳಲ್ಲಿ 8 ಜಯದೊಂದಿಗೆ 16 ಅಂಕದೊಂದಿಗೆ ಅಗ್ರಸ್ಥಾನದಲ್ಲಿ ಉಳಿದುಕೊಂಡಿದೆ. ಬಹುತೇಕ ಪ್ಲೇಆಫ್ ಗೆ ಪ್ರವೇಶಿಸಿದೆ. ಲಕ್ನೋ ಸೂಪರ್ ಜೈಂಟ್ಸ್ 10 ಅಂಕದೊಂದಿಗೆ 3ನೇ ಸ್ಥಾನದಲ್ಲಿ ಉಳಿದುಕೊಂಡಿದೆ.

- Advertisement -

ಸಂಜು ಸ್ಯಾಮ್ಸನ್ ಮತ್ತು ಧ್ರುವ್ ಜುರೆಲ್ ಮುರಿದ 4ನೇ ವಿಕೆಟ್ ಗೆ 121 ರನ್ ಜೊತೆಯಾಟ ನೀಡಿದರು. ಸ್ಯಾಮ್ಸನ್ ಅದ್ಭುತ ಆಟವಾಡಿ 33 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ ನೆರವಿನೊಂದಿಗೆ 71 ರನ್ ಬಾರಿಸಿ ಔಟಾಗದೇ ಉಳಿದರೆ, ಧ್ರುವ್ ಜುರೆಲ್ 34 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 52 ರನ್ ಗಳಿಸಿದರು.

Join Whatsapp