ಗುವಾಹಟಿ: ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ ಎದುರು 5 ವಿಕೆಟ್‌ಗಳಿಂದ ಸೋಲು ಅನುಭವಿಸಿದೆ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನಕ್ಕೆ ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 144 ರನ್ ಗಳಿಸಲಷ್ಟೇ ಸಾಧ್ಯವಾಯಿತು
.ಪಂಜಾಬ್ ತಂಡ 18.5 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವು ತನ್ನದಾಗಿಸಿದೆ. ಪಂಜಾಬ್ ಪರ ಸ್ಯಾಮ್ ಕರಣ್ 63 ರನ್ ಹೊಡೆದರು.
ಪ್ಲೇ ಆಫ್ ರೇಸ್ನಿಂದ ಈಗಾಗಲೇ ಹೊರಬಿದ್ದಿರುವ ಕಾರಣ ಪಂಜಾಬ್ಗೆ ಈ ಗೆಲುವು ಕೇವಲ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರುವಲ್ಲಿ ಮಾತ್ರ ಸಹಾಯ ಮಾಡಿತು. ಹಾಲಿ ಚಾಂಪಿಯನ್ ಕೊನೆಯ ಸ್ಥಾನಕ್ಕೆ ಕುಸಿಯಿತು. ಸದ್ಯ ಪಂಜಾಬ್ 9ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ತನ್ನ ಅಂತಿಮ ಲೀಗ್ ಪಂದ್ಯವನ್ನು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಪಂದ್ಯ ಮೇ 19ರಂದು ನಡೆಯಲಿದೆ.