ಜೈಪುರ: ರಾಜಸ್ಥಾನದಲ್ಲಿ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ಹಣದ ಹೊಳೆ ಹರಿಸುತ್ತಿದ್ದು, ಕಳೆದ 15 ದಿನಗಳಲ್ಲಿ ಬರೋಬ್ಬರಿ 244 ಕೋಟಿ ರೂಪಾಯಿ ಹಣವನ್ನು ಜಾರಿ ಏಜೆನ್ಸಿಗಳು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.: ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಳೆದ 15 ದಿನಗಳಲ್ಲಿ 244 ಕೋಟಿ ರೂಪಾಯಿ ಹಣವನ್ನು ಜಾರಿ ಏಜೆನ್ಸಿಗಳು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್, ಅಬಕಾರಿ, ಆದಾಯ ತೆರಿಗೆ ಮತ್ತಿತರ ಸಂಸ್ಥೆಗಳಿಂದ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಮತ್ತು ಅಕ್ರಮ ನಗದು, ಮದ್ಯ, ಮಾದಕ ದ್ರವ್ಯ, ಚಿನ್ನ, ಬೆಳ್ಳಿ ಇತ್ಯಾದಿಗಳನ್ನು ವಶಪಡಿಸಿಕೊಳ್ಳುವಲ್ಲಿ ಹೊಸ ದಾಖಲೆ ಮಾಡಲಾಗಿದೆ. 2023ರಲ್ಲಿ ಒಟ್ಟು 1,000 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
2021 ರಲ್ಲಿ 322 ಕೋಟಿ ರೂ., 2022 ರಲ್ಲಿ 347 ಕೋಟಿ ರೂ. ಮತ್ತು 2023 ರಲ್ಲಿ ಇದುವರೆಗೆ 1,021 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜೂನ್ನಿಂದ ಚುನಾವಣಾ ಆಯೋಗ ಎಲ್ಲಾ ಜಾರಿ ಸಂಸ್ಥೆಗಳೊಂದಿಗೆ ನೇರ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಅಂದಿನಿಂದ ರೂ. 648 ಕೋಟಿ ಮೌಲ್ಯದ ನಗದು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.