ನವದೆಹಲಿ: ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.
ಈ ನೇಮಕದೊಂದಿಗೆ ಸುಪ್ರೀಂ ಕೋರ್ಟ್’ನ ಎಲ್ಲಾ 34 ನ್ಯಾಯಾಧೀಶರ ಹುದ್ದೆಗಳು ಭರ್ತಿಯಾದಂತಾಗಿದೆ. 2019ರ ಸೆಪ್ಟೆಂಬರ್’ನಿಂದ ನವೆಂಬರ್ ಅವಧಿಯಲ್ಲಿ ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಪೂರ್ಣ ಬಲವನ್ನು ಹೊಂದಿತ್ತು.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್’ನ ನ್ಯಾಯಮೂರ್ತಿಯಾಗಿದ್ದ ಬಿಂದಾಲ್ ಅವರು ಪ್ರಸ್ತುತ ಅಲಹಾಬಾದ್ ಹೈಕೋರ್ಟ್’ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಹೈಕೋರ್ಟ್ ನ್ಯಾಯಾಧೀಶರ ಅಖಿಲ ಭಾರತ ಜ್ಯೇಷ್ಠತೆಯಲ್ಲಿ 2 ನೇ ಸ್ಥಾನದಲ್ಲಿದ್ದಾರೆ.
(ಕೃಪೆ: ಬಾರ್&ಬೆಂಚ್)