ಮಂಗಳೂರು | ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ವಕೀಲ ರಾಜೇಶ್ ಶೀಘ್ರ ಬಂಧನ

Prasthutha: December 4, 2021

ಮಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿ ವಕೀಲ ರಾಜೇಶ್ ಎಂಬಾತನನ್ನು ಶ್ರೀಘ್ರವಾಗಿ ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.


ಈ ಕುರಿತು ಮಾತನಾಡಿದ ಅವರು, ಆರೋಪಿ ರಾಜೇಶ್ ನನ್ನು ಬಂಧಿಸಲು ಇನ್ನೂ ಸಾಧ್ಯವಾಗಿಲ್ಲ. ಈಗಾಗಲೇ ಇಬ್ಬರು ಆರೋಪಿಗಳ ಬಂಧನ ಆಗಿದೆ. ಜಿಲ್ಲಾ ಕೋರ್ಟ್, ಹೈಕೋರ್ಟ್ ನಲ್ಲಿ ಆರೋಪಿಗೆ ಜಾಮೀನು ಸಿಗದಂತೆ ಮಾಡಲಾಗಿದೆ. ಈಗಾಗಲೇ ಎರಡು ಬಾರಿ ಬೇಲ್ ನಿರಾಕರಣೆ ಆಗಿದೆ. ಶೀಘ್ರವಾಗಿ ಆರೋಪಿ ಬಂಧನ ಮಾಡಲಾಗುತ್ತದೆ. ಆರೋಪಿ ಪತ್ತೆಗೆ ಬೇಕಾದ ಕ್ರಮ ಕೈಗೊಳ್ಳಲಾಗಿದೆ. ವಕೀಲ ರಾಜೇಶ್ ಬ್ಯಾಂಕ್ ಖಾತೆಗಳನ್ನು ಈಗಾಗಲೇ ತಡೆ ಹಿಡಿಯಲಾಗಿದೆ ಮಾಹಿತಿ ನೀಡಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!