ರಾಜೀವ್ ಹತ್ಯೆ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಮುಂದಾದ ಕಾಂಗ್ರೆಸ್

Prasthutha|

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಹೊಸ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಜ್ಜಾಗಿದೆ.

- Advertisement -

ಆದೇಶದಲ್ಲಿನ ಆಧಾರಗಳನ್ನು ಪ್ರಶ್ನಿಸಿ ಮುಂದಿನ 3-4 ದಿನಗಳಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಅಪರಾಧಿಗಳ ಬಿಡುಗಡೆಯ ವಿರುದ್ಧ ಕೇಂದ್ರವು ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.

- Advertisement -

ನಳಿನಿ ಶ್ರೀಹರನ್ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ನವೆಂಬರ್ 11 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

Join Whatsapp