ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ನಳಿನಿ ಶ್ರೀಹರನ್ ತಮ್ಮನ್ನು ಅಕಾಲಿಕವಾಗಿ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಸಹ-ಅಪರಾಧಿ ಎ.ಜಿ.ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನಳಿನಿ, ಶೀಘ್ರವಾಗಿ ಬಿಡುಗಡೆ ಮಾಡುವಂತೆ ಜೂನ್ 17 ರಂದು ಮಾಡಿದ ಮನವಿಯನ್ನುತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ನಳಿನಿ ಶ್ರೀಹರನ್ ಮತ್ತು ರವಿಚಂದ್ರನ್ ಅವರು ರಾಜ್ಯಪಾಲರ ಅನುಮತಿಯಿಲ್ಲದೆ ತಮ್ಮನ್ನು ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಜೂನ್ 17 ರಂದು ತಿರಸ್ಕರಿಸಿತ್ತು.