ರಾಜೀವ್ ಗಾಂಧಿ ಹತ್ಯೆ ಪ್ರಕರಣ; ಅಪರಾಧಿಗಳ ಬಿಡುಗಡೆ

Prasthutha|

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರು ಅಪರಾಧಿಗಳನ್ನು 2022 ನವೆಂಬರ್ 12 ರಂದು ಬಿಡುಗಡೆ ಮಾಡಲಾಗುವುದು ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ನಾವು ನ್ಯಾಯಾಲಯದ ಆದೇಶಗಳಿಗಾಗಿ ಕಾಯುತ್ತಿದ್ದೇವೆ. ನಮಗೆ ಆದೇಶಗಳು ಮತ್ತು ಅಗತ್ಯ ಸರ್ಕಾರಿ ಸೂಚನೆಗಳು ದೊರೆತ ನಂತರ, ಅಪರಾಧಿಗಳನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್, ಆರ್.ಪಿ. ರವಿಚಂದ್ರನ್ ಸೇರಿದಂತೆ ಆರು ಮಂದಿ ಅಪರಾಧಿಗಳನ್ನು ಅವಧಿಗೂ ಮುನ್ನ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.



Join Whatsapp