ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್ ಕುಮಾರ್ ದಿಢೀರ್ ರಾಜೀನಾಮೆ: ನೂತನ ಉಪಾಧ್ಯಕ್ಷರಾಗಿ ಸುಮನ್ ಕೆ. ಬೆರಿ ನೇಮಕ

Prasthutha|

ಹೊಸದಿಲ್ಲಿ: ಖ್ಯಾತ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್  ಅವರು ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ  ಸರಕಾರವು ಸುಮನ್ ಕೆ.  ಬೆರಿ ಅವರನ್ನು ನೂತನ ಉಪಾಧ್ಯಕ್ಷರನ್ನಾಗಿ ನೇಮಿಸಿದೆ.

- Advertisement -

ಬೆರಿ ಅವರು ಮೇ 1, 2022 ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜೀವ್ ಕುಮಾರ್ ಆಗಸ್ಟ್ 2017 ರಲ್ಲಿ ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಎಪ್ರಿಲ್ 30ಕ್ಕೆ  ತಮ್ಮ ಸ್ಥಾನದಿಂದ ನಿರ್ಗಮಿಸಲಿದ್ದಾರೆ.

- Advertisement -

ಕೃಷಿ, ಹೂಡಿಕೆ, ಆಸ್ತಿ ಹಣಗಳಿಕೆ, ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮ ಹಾಗೂ ಎಲೆಕ್ಟ್ರಿಕ್ ವಾಹನಗಳ ಮೇಲೆ ಕೇಂದ್ರೀಕರಿಸಿ ನೀತಿ ಆಯೋಗದ ನೀತಿ ರಚನೆಯಲ್ಲಿ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಕುಮಾರ್ ಅವರು ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಡಿಫಿಲ್ ಮತ್ತು ಲಕ್ನೋ ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪಡೆದಿದ್ದಾರೆ.

ಬೆರಿ ಅವರು ಈ ಹಿಂದೆ ಹೊಸದಿಲ್ಲಿಯ ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್ ನ ಮುಖ್ಯ ಕಾರ್ಯನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು. ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ, ಅಂಕಿಅಂಶ ಆಯೋಗ ಹಾಗೂ  ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿಯ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೂ ಆಗಿದ್ದರು.



Join Whatsapp