ರಾಜ್ಯಸಭಾ ಚುನಾವಣೆ: ಬಿಜೆಪಿ ಹಾಗೂ NDA ಮೈತ್ರಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Prasthutha|

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಕೆ.ಭಾಂಡಗೆ ಹಾಗೂ ಬಿಜೆಪಿ-ಜೆಡಿಎಸ್ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದರು.

- Advertisement -

ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್‌.ಡಿ. ಕುಮಾರಸ್ವಾಮಿ, ವಿರೋಧ ಪಕ್ಷ ನಾಯಕ ಆರ್.‌ ಅಶೋಕ್‌, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕ ಸುನೀಲ್‌ ಕಾರ್ಕಳ, ವಿಧಾನಸಭೆ ಮುಖ್ಯ ಸಚೇತಕ ದೊಡ್ಡನಗೌಡ ಎಚ್‌. ಪಾಟೀಲ್, ಶಾಸಕರಾದ ಸತೀಶ್ ರೆಡ್ಡಿ, ಬಿ.ಪಿ ಹರೀಶ್, ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಪಿ.ಹೆಚ್.ಪೂಜಾರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಶಹಾಪುರ್ ಅವರು ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಉಭಯ ಸದನಗಳ ಸದಸ್ಯರು ಉಪಸ್ಥಿತರಿದ್ದರು.

Join Whatsapp