ರಾಜ್ಯಸಭೆ ಚುನಾವಣೆ: ಶಾಸಕರನ್ನು ಭದ್ರವಾಗಿಟ್ಟ ಕಾಂಗ್ರೆಸ್

Prasthutha|

ಜೈಪುರ: ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಆಡಳಿತಾರೂಢ  ಕಾಂಗ್ರೆಸ್ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ.  ಈ  ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ಶಾಸಕರನ್ನು  ಮೇ ತಿಂಗಳಲ್ಲಿ ಅಖಿಲ ಭಾರತ ಚಿಂತನ ಶಿಬಿರ ನಡೆದ ಐಷಾರಾಮಿ ಹೋಟೆಲ್ಗೆ  ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು  ವರದಿಗಳು ಲಭಿಸಿವೆ.

- Advertisement -

“ಪಕ್ಷದ ಎಲ್ಲ ಶಾಸಕರು ಉದಯಪುರಕ್ಕೆ ಆಗಮಿಸುವಂತೆ ಸೂಚಿಸಲಾಗಿದ್ದು,  ಎರಡು ದಿನಗಳಲ್ಲಿ  ಪ್ರಯಾಣ ಬೆಳೆಸಲಿದ್ದಾರೆ” ಎಂದು ರಾಜ್ಯ ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ. ಕಾಂಗ್ರೆಸ್ ಶಾಸಕರ ಜತೆಗೆ ರಾಜ್ಯ ಸರ್ಕಾರವನ್ನು ಬೆಂಬಲಿಸುತ್ತಿರುವ ಇತರ ಪಕ್ಷಗಳು ಮತ್ತು ಪಕ್ಷೇತರ ಶಾಸಕರನ್ನೂ ಉದಯಪುರಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿರುವ   ಸುಭಾಷ್ಚಂಸದ್ರ ಉಮೇದುವಾರಿಕೆಯನ್ನು ಬಿಜೆಪಿ ಬೆಂಬಲಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಂಜಾಗ್ರತಾ ಕ್ರಮವಾಗಿ ತನ್ನ ಶಾಸಕರನ್ನು ಭದ್ರಪಡಿಸಿಕೊಂಡಿದೆ.



Join Whatsapp