ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಬೆಳಗ್ಗೆ 10 ಗಂಟೆ ಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಒಟ್ಟು 4 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 223 ಶಾಸಕರು ಮತ ಚಲಾಯಿಸಲಿದ್ದಾರೆ. ಶಾಸಕರ ಸಂಖ್ಯಾಬಲದಂತೆ ನಾಲ್ಕು ಸ್ಥಾನದ ಪೈಕಿ ಕಾಂಗ್ರೆಸ್ಗೆ 3, ಬಿಜೆಪಿಗೆ 1 ಸ್ಥಾನದ ಗೆಲುವು ಸಲೀಸಾಗಲಿದೆ.
ಕಾಂಗ್ರೆಸ್ನಿಂದ ಅಜಯ್ ಮಕೇನ್, ಜಿ.ಸಿ ಚಂದ್ರಶೇಖರ್, ಡಾ. ಸೈಯದ್ ನಾಸೀರ್ ಹುಸೇನ್ ಕಣದಲ್ಲಿದ್ದಾರೆ.
ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಸ್ಪರ್ಧೆಗಿಳಿದಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿರೋದರಿಂದಲೇ ಪೈಪೋಟಿ ಜೋರಾಗಿದೆ. ಶಾಸಕರನ್ನು ಸೆಳೆಯೋ ಕಸರತ್ತು ನಡೆಯುತ್ತಿದೆ. ಸೋಮವಾರ ರಾತ್ರಿವರೆಗೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳು ಪಕ್ಷಗಳ ಶಾಸಕಾಂಗ ಪಕ್ಷದ ಸಭೆ ನಡೆಸಿ ಭರ್ಜರಿ ರಣತಂತ್ರ ರೂಪಿಸಿವೆ. ಅದರಲ್ಲೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಮತದಾನ ಹೇಗೆ ಮಾಡಬೇಕು ಎಂಬ ತರಬೇತಿಯನ್ನೂ ನೀಡಲಾಗಿದೆ.