ರಾಜ್ಯಸಭಾ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಆರಂಭ

Prasthutha|

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಸೇರಿದಂತೆ ದೇಶದ 4 ರಾಜ್ಯಗಳ 16 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಮತದಾನ ಆರಂಭಗೊಂಡಿದೆ. ವಿಧಾನಸಭೆಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಶುರುವಾಗಿದೆ. ಈವರೆಗೆ ಬಿಜೆಪಿಯಿಂದ 65, ಕಾಂಗ್ರೆಸ್’ನಿಂದ 20 ಮತ್ತು ಜೆಡಿಎಸ್’ನಿಂದ 7 ಮತಗಳು ಚಲಾವಣೆಯಾಗಿದೆ.

- Advertisement -

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಚಲಾಯಿಸಿದ್ದಾರೆ. ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೆ ಎಸ್ ಈಶ್ವರಪ್ಪ ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಟ್ಟು 224 ಶಾಸಕರು ಮತ ಚಲಾಯಿಸಲಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಸ್ತುತ 245 ಸದಸ್ಯರ ಬಲ ಹೊಂದಿದೆ. ಇದರಲ್ಲಿ 233 ಚುನಾಯಿತ ಮತ್ತು 12 ನಾಮನಿರ್ದೇಶಿತ ಸದಸ್ಯರು ಸೇರಿದ್ದಾರೆ. ಸಂವಿಧಾನದ ಪ್ರಕಾರ ಮೇಲ್ಮನೆಯು 250 ಕ್ಕಿಂತ ಹೆಚ್ಚು ಸದಸ್ಯರನ್ನು ಹೊಂದಿರಬಾರದು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 233 ಸದಸ್ಯರನ್ನು ಆಯ್ಕೆ ಮಾಡಿದರೆ ರಾಷ್ಟ್ರಪತಿಗಳು ಉಳಿದ 12 ಮಂದಿಯನ್ನು ನಾಮನಿರ್ದೇಶನ ಮಾಡುತ್ತಾರೆ.

Join Whatsapp