ರಾಜ್ಯಸಭೆ ಚುನಾವಣೆ: ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ

Prasthutha|

ಬೆಂಗಳೂರು: ರಾಜ್ಯ ಸಭೆ ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -


ಇಂದಿನಿಂದ 28ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ.


ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ರಿಂದ ಆದೇಶ ನೀಡಲಾಗಿದೆ. ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮಂಗಳವಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ.



Join Whatsapp