ನವದೆಹಲಿ: ಹಣದುಬ್ಬರ ಮತ್ತು ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಬಗ್ಗೆ ಪ್ರತಿಪಕ್ಷಗಳ ಸದಸ್ಯರು ನಡೆಸಿದ ಗದ್ದಲದ ಹಿನ್ನೆಲೆಯಲ್ಲಿ ರಾಜ್ಯಸಭೆ ಮತ್ತು ಲೋಕಸಭೆಯನ್ನು ಇಂದೂ ಕೂಡ ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು.
ಅಧಿವೇಶನ ಪ್ರಾರಂಭವಾದಾಗಿನಿಂದ ಎರಡೂ ಸದನಗಳು ನಿರಂತರವಾಗಿ ಮುಂದೂಡಿಕೆಗೆ ಸಾಕ್ಷಿಯಾಗುತ್ತಿವೆ.
ಮಾನ್ಸೂನ್ ಅಧಿವೇಶನ ಆರಂಭವಾದ ನಂತರ ಇಂದು ಸತತ ನಾಲ್ಕನೇ ದಿನವಾಗಿದ್ದು, ಯಾವುದೇ ಉತ್ಪಾದಕತೆಯಿಲ್ಲದೆ ಸಭೆ ಸೇರಿದ ಕೆಲವೇ ನಿಮಿಷಗಳಲ್ಲಿ ಉಭಯ ಸದನಗಳನ್ನು ಮುಂದೂಡಲಾಯಿತು.
ಕಾಂಗ್ರೆಸ್ ಸಂಸದರು ಸೇರಿದಂತೆ ವಿರೋಧ ಪಕ್ಷದ ನಾಯಕರು ಇಂದು ಸಂಸತ್ತಿನಲ್ಲಿ ಹಣದುಬ್ಬರ ಮತ್ತು ಬೆಲೆ ಏರಿಕೆಯ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ.