ರಾಜ್ಯಸಭಾ ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಡಾ. ಕೆ. ನಾರಾಯಣ ನಾಮಪತ್ರ ಸಲ್ಲಿಕೆ

Prasthutha|

ಬೆಂಗಳೂರು : ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಸ್ಥಾನಕ್ಕೆ ಡಿ.1ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಕೆ. ನಾರಾಯಣ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು.

- Advertisement -

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ಡಾ. ನಾರಾಯಣ ಅವರು ಮುದ್ರಣ ಉದ್ಯಮದಲ್ಲಿ ನಿರತರಾಗಿರುವವರು. ಬಿಜೆಪಿಯ ಸಹ ಸಂಘಟನೆಗಳ ನಂಟಿದ್ದ ಡಾ. ನಾರಾಯಣ ಅವರಿಗೆ ಇದೀಗ ರಾಜ್ಯಸಭಾ ಸದಸ್ಯರಾಗುವ ಅವಕಾಶ ದೊರಕಿದೆ.

- Advertisement -