February 11, 2021

ಟಿಕಾಯತ್ ನೇತೃತ್ವದಲ್ಲಿ ಬೆಂಗಳೂರಿನಲ್ಲೂ ರೈತರಿಂದ ಬೃಹತ್ ಪ್ರತಿಭಟನೆ

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ದಕ್ಷಿಣ ಭಾರತದ ರೈತರೂ ಕೂಡ ಕೈಜೋಡಿಸಲು ಸಿದ್ಧರಾಗಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರ ನೇತೃತ್ವದಲ್ಲಿ ಹೋರಾಟ ನಡೆಸಲು ಕರ್ನಾಟಕದ ರೈತ ಸಂಘಟನೆಗಳು ನಿರ್ಧರಿಸಿದೆ.

ಬೆಂಗಳೂರಿನಲ್ಲಿ ನಡೆಯುವ ಬೃಹತ್ ರ‍್ಯಾಲಿಗೆ ಟಿಕಾಯತ್ ಅವರನ್ನು ಆಹ್ವಾನಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕರ್ನಾಟಕ ಫಾರ್ಮರ್ಸ್ ಅಸೋಸಿಯೇಶನ್ ಮತ್ತು ಗ್ರೀನ್ ಆರ್ಮಿ ಅಧ್ಯಕ್ಷ ನಾಗೇಂದ್ರ ಹೇಳಿದ್ದಾರೆ. “ಈ ಹೋರಾಟದಲ್ಲಿ ದಕ್ಷಿಣ ಭಾರತದ ಎಲ್ಲ ರೈತರನ್ನು ಒಂದುಗೂಡಿಸಲು ನಾವು ತೀರ್ಮಾನಿಸಿದ್ದೇವೆ. ಮೂರು ಕೃಷಿ ಸುಧಾರಣಾ ಕಾನೂನುಗಳು ಮತ್ತು ರೈತ ಸಮುದಾಯ ಎದುರಿಸುತ್ತಿರುವ ಇತರ ಬಿಕ್ಕಟ್ಟುಗಳನ್ನು ಪರಿಹರಿಸಬೇಕಾಗಿದೆ” ಎಂದು ನಾಗೇಂದ್ರ ಹೇಳಿದ್ದಾರೆ. ಕರ್ನಾಟಕದಲ್ಲಿ ಗೋಹತ್ಯೆಯನ್ನು ಬಿಜೆಪಿ ಸರ್ಕಾರ ನಿಷೇಧಿಸಿರುವುದಕ್ಕೂ ವಿರುದ್ಧವಾಗಿದೆ ಈ ರ‍್ಯಾಲಿ ಎಂದು ಅವರು ಹೇಳಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!