ರಕ್ಷಾ ರಾಮಯ್ಯ ಅವರಿಗೆ ಆಂಧ್ರಪ್ರದೇಶದ ಉಸ್ತುವಾರಿ: ಪಕ್ಷ ಸಂಘಟನೆಗೆ ಶಕ್ತಿ ಮೀರಿ ಪ್ರಯತ್ನ

Prasthutha|

ಬೆಂಗಳೂರು; ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರಿಗೆ ಆಂಧ್ರಪ್ರದೇಶ ರಾಜ್ಯದ ಉಸ್ತುವಾರಿ ನೀಡಲಾಗಿದೆ.

- Advertisement -

ರಾಷ್ಟ್ರೀಯ ಯುವ ಕಾಂಗ್ರೆಸ್ ನ ಹಲವು ಪದಾಧಿಕಾರಿಗಳಿಗೆ ವಿವಿಧ ರಾಜ್ಯಗಳ ಜವಾಬ್ದಾರಿ ಕೊಟ್ಟಿದ್ದು, ರಕ್ಷಾ ರಾಮಯ್ಯ ಅವರಿಗೆ ಪಕ್ಕದ ಆಂಧ್ರಪ್ರದೇಶದಲ್ಲಿ ಯುವ ಕಾಂಗ್ರೆಸ್ ವ್ಯವಹಾರಗಳನ್ನು ನೋಡಿಕೊಳ್ಳುವ ಉಸ್ತುವಾರಿ ವಹಿಸಲಾಗಿದೆ.

ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಬೇರುಗಳು ಗಟ್ಟಿಯಾಗಿದ್ದು, ಯುವ ಕಾಂಗ್ರೆಸ್ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢ ಮತ್ತು ಪ್ರಬಲವಾಗಿ ಸಂಘಟಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ರಕ್ಷಾ ರಾಮಯ್ಯ ಹೇಳಿದ್ದಾರೆ.  

- Advertisement -

ತಮಗೆ ನೂತನ ಜವಾಬ್ದಾರಿ ವಹಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ಎಐಸಿಸಿ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲವಾರು ಅವರಿಗೆ ರಕ್ಷಾ ರಾಮಯ್ಯ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.



Join Whatsapp