ರಾಮಭಕ್ತರನ್ನು ಟಾರ್ಗೆಟ್ ಮಾಡಿಲ್ಲ, ಕೋಮು ಬಣ್ಣ ಕಟ್ಟುವುದು ಸೂಕ್ತ ಅಲ್ಲ: ಸಚಿವ ಪರಮೇಶ್ವರ್

Prasthutha|

ಬೆಂಗಳೂರು: ರಾಮಭಕ್ತರನ್ನು ಟಾರ್ಗೆಟ್ ಮಾಡುವ ಪ್ರಯತ್ನ ಮಾಡಿಲ್ಲ. ಇದಕ್ಕೆ ಕೋಮು ಬಣ್ಣ ಕಟ್ಟುವುದು ಸೂಕ್ತ ಅಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದರು.

- Advertisement -

ಸೋಮವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಮಭಕ್ತರನ್ನು ಗುರಿಯಾಗಿಸಿ ಸರ್ಕಾರ ಬಂಧನ ಮಾಡುತ್ತಿದೆ ಎಂಬ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವ ಕ್ರಮ ಆಗಬೇಕೋ ಅದನ್ನು ಪೊಲೀಸ್ ಇಲಾಖೆ ಮಾಡುತ್ತೆ. ಆ ರೀತಿ ಏನು ಇಲ್ಲ. ಹಳೆ ಕೇಸುಗಳನ್ನೆಲ್ಲ ಕ್ಲಿಯರ್ ಮಾಡಬೇಕು ಎಂದು ಸೂಚನೆ ಕೊಡಲಾಗಿದೆ. ರಾಜ್ಯಾದ್ಯಂತ ಇರುವ ಹಳೆ ಪ್ರಕರಣಗಳನ್ನು ಕ್ಲಿಯರ್ ಮಾಡುವಂತೆ ಸಂದೇಶ ಕೊಟ್ಟಿದ್ವಿ ಎಂದರು.

ವರ್ಷಾನುಗಟ್ಟಲೆ ಬಾಕಿ ಉಳಿದಿರುವ ಕೇಸ್ ಗಳು ಕ್ಲಿಯರ್ ಆಗಬೇಕು. ಅದರಲ್ಲಿ ಹುಬ್ಬಳ್ಳಿಯಲ್ಲಿ 32 ಕೇಸುಗಳು ಪೆಂಡಿಂಗ್ ಇದ್ದವು. ಅದನ್ನು ಓಪನ್ ಮಾಡುವಾಗ ಈ ಕೇಸ್ ಬಂದಿದೆ. ಈ ಪ್ರಕರಣದಲ್ಲಿ ಅರೆಸ್ಟ್ ಮಾಡಿ ಕಸ್ಟಡಿಗೆ ಕೊಟ್ಟಿದ್ದಾರೆ. ಇದರಲ್ಲಿ ಬೇರೆ ಉದ್ದೇಶ ಇಟ್ಕೊಂಡಿಲ್ಲ. ಆರ್ ಅಶೋಕ್ ಅವರದ್ದು ತಪ್ಪು ಕಲ್ಪನೆ ಎಂದರು.

Join Whatsapp