ನವದೆಹಲಿ: ಅಯೋಧ್ಯೆಯಲ್ಲಿ ಇಂದು ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಪಾಲ್ಗೊಳ್ಳುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಶೀತ ವಾತಾವರಣವಿರುವ ಕಾರಣ 96 ವರ್ಷದ ನಾಯಕ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಅಡ್ವಾಣಿಯವರೊಂದಿಗೆ ರಾಮಮಂದಿರ ಚಳವಳಿಯ ನೇತೃತ್ವ ವಹಿಸಿದ್ದ ಮುರಳಿ ಮನೋಹರ್ ಜೋಶಿ ಅವರನ್ನೂ ಸಮಾರಂಭದಿಂದ ಹೊರಗುಳಿಯುವಂತೆ ಕೇಳಲಾಯಿತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ (ರಾಮ ಮಂದಿರ ಟ್ರಸ್ಟ್) ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಅಡ್ವಾಣಿ ಮತ್ತು ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ವಿನಂತಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.