Home ಟಾಪ್ ಸುದ್ದಿಗಳು ನೆಹರೂ ಕಾಲದ ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲೇ ರಾಮ ಮಂದಿರ ಇತ್ತು: ಸ್ಫೋಟಕ ಹೇಳಿಕೆ ನೀಡಿದ ಸಚಿವ ನಾಗೇಂದ್ರ

ನೆಹರೂ ಕಾಲದ ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲೇ ರಾಮ ಮಂದಿರ ಇತ್ತು: ಸ್ಫೋಟಕ ಹೇಳಿಕೆ ನೀಡಿದ ಸಚಿವ ನಾಗೇಂದ್ರ

ಮಂಗಳೂರು: ಶ್ರೀರಾಮ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯ ಗೊಳಿಸಲು ಹೊರಟಿದೆ ಎಂದು ಕ್ರೀಡಾ ಸಚಿವ ನಾಗೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ರಾಮ ಭಜನೆ ಮಾಡುತ್ತಾ ಬೆಳೆದವನು. ರಾಮ, ಸೀತೆ, ಲಕ್ಷ್ಮಣ, ಭರತ, ಅಳಿಲು ಸೇವೆ ಮಾಡಿದ ಜಾಂಬವ ಹೀಗೆ ಎಲ್ಲರೂ ಇದ್ದ ರಾಮ ನಮಗೆ ಬೇಕು. ಆದರೆ ಕಾಂಗ್ರೆಸಿಗರಿಗೆ ಕೋಮು ಭಾವನೆಯ ರಾಮ ಬೇಡ. ರಾಮ ಮಂದಿರ ಬಿಜೆಪಿಗರ ಸೊತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ತಪ್ಪು ಎಂದರು.

ಅನಂತ್ ಮಾತಿಗೆ ಕಿಮ್ಮತ್ತಿಲ್ಲ ಎಂದು ನಾಗೇಂದ್ರ ಇದೇ ಸಂದರ್ಭ ಹೇಳಿದ್ದಾರೆ. ನಾಡಿನ ಪುರಾತನ ಮಸೀದಿಗಳನ್ನು ಒಡೆದು ಅಲ್ಲಿ ದೇವಸ್ಥಾನ ನಿರ್ಮಿಸುತ್ತೇವೆ ಎನ್ನುವ ಅನಂತ ಕುಮಾರ ಹೆಗಡೆ ಮಾತಿಗೆ ಕಿಮ್ಮತ್ತಿಲ್ಲ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಇಂತಹ ಮಾತುಗಳು ಸಹಜ. ಅದನ್ನು ಪಕ್ಷ ಕೂಡ ಗಂಭೀರ ಪರಿಗಣಿಸಬೇಕಾಗಿಲ್ಲ ಎಂದರು.

ಅವರು ಜಾತಿ, ಧರ್ಮ ಬೇರೆ ಮಾಡಿಯೇ ರಾಜಕಾ ರಣ ಮಾಡಿದವರು. ಶಾಂತಿ ಕದಡಿ ರಾಜ ಕೀಯ ಲಾಭ ಪಡೆಯುವ ವ್ಯಕ್ತಿ ಅವರು. ಯಾವುದೇ ಪುಸ್ತಕದಲ್ಲಿ ಮಸೀದಿಗಳು ದೇವಸ್ಥಾನ ಆಗಿತ್ತು ಎಂದು ಉಲ್ಲೇಖ ಇಲ್ಲ. ಅವರಿಗೆ ತಲೆಗೆ ಬಂದಿದ್ದನ್ನು ಹೇಳಿಕೊಂಡು ಹೋಗುತ್ತಾರೆ ಎಂದು ಹೇಳಿದ್ದಾರೆ.

Join Whatsapp
Exit mobile version