ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರಕ್ಕೆ ಬೀಗ: ಪುನರುಚ್ಚರಿಸಿದ ಪ್ರಧಾನಿ ಮೋದಿ

Prasthutha|

ಶಿಮ್ಲಾ: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರಿದರೆ ಅಯೋಧ್ಯೆಯ ರಾಮ ಮಂದಿರಕ್ಕೆ ಬೀಗ ಜಡಿಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.

- Advertisement -


ಹಿಮಾಚಲ ಪ್ರದೇಶದ ಸಿರ್ಮೌರ್ನಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡಿರುವ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


‘ಕಾಂಗ್ರೆಸ್ ಮಾಡಿರುವ ಷಡ್ಯಂತ್ರವನ್ನು ಆ ಪಕ್ಷದವರೇ ಬಹಿರಂಗಪಡಿಸಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ, ರಾಮ ಮಂದಿರಕ್ಕೆ ಬೀಗ ಜಡಿದು, ಬಾಲರಾಮ ಟೆಂಟ್ನಲ್ಲಿ ಕೂರುವುದು ಅನಿವಾರ್ಯವಾಗುವಂತೆ ಮಾಡಲಿದ್ದಾರೆ. ಹೀಗಾಗಿ ಪ್ರತಿ ಮತಗಟ್ಟೆಯಿಂದ ಇವರನ್ನು ಗುಡಿಸಿಹಾಕಬೇಕಿದೆ.ನನ್ನ ಸ್ವಚ್ಛ ಭಾರತ ಅಭಿಯಾನ ನೆನಪಿದೆಯಲ್ಲ, ಜೂನ್ 1ರಂದು ಅದಕ್ಕಾಗಿ ಮೀಸಲಿಡಿ’ ಎಂದು ಕರೆ ನೀಡಿದ್ದಾರೆ.

Join Whatsapp
Exit mobile version