ಒಂದು ದೇಶ, ಒಂದು ಚುನಾವಣೆ: ಪರಿಶೀಲನೆಗೆ ರಾಮನಾಥ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

Prasthutha|

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಸಾಧ್ಯತೆಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

- Advertisement -


ಸೆಪ್ಟೆಂಬರ್ 18 ಮತ್ತು 22ರ ನಡುವೆ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದ ಒಂದು ದಿನದ ನಂತರ ಈ ಸುದ್ದಿ ಹೊರಬಿದ್ದಿದೆ.


ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವ ಪರಿಕಲ್ಪನೆ ಕುರಿತಂತೆ ಹಲವು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಪ್ರತಿಪಾದಿಸುತ್ತಿದ್ದಾರೆ. ಲೋಕಸಭೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಆ ಪರಿಕಲ್ಪನೆಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ.