Home ಟಾಪ್ ಸುದ್ದಿಗಳು ಒಂದು ದೇಶ, ಒಂದು ಚುನಾವಣೆ: ಪರಿಶೀಲನೆಗೆ ರಾಮನಾಥ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

ಒಂದು ದೇಶ, ಒಂದು ಚುನಾವಣೆ: ಪರಿಶೀಲನೆಗೆ ರಾಮನಾಥ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಸಾಧ್ಯತೆಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.


ಸೆಪ್ಟೆಂಬರ್ 18 ಮತ್ತು 22ರ ನಡುವೆ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದ ಒಂದು ದಿನದ ನಂತರ ಈ ಸುದ್ದಿ ಹೊರಬಿದ್ದಿದೆ.


ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವ ಪರಿಕಲ್ಪನೆ ಕುರಿತಂತೆ ಹಲವು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಪ್ರತಿಪಾದಿಸುತ್ತಿದ್ದಾರೆ. ಲೋಕಸಭೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಆ ಪರಿಕಲ್ಪನೆಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ.

Join Whatsapp
Exit mobile version