ಕೊಲ್ಕತ್ತಾ: ಕಳೆದ ತಿಂಗಳು ರಾಮನವಮಿ ಆಚರಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದ ಹಿಂಸಾಚಾರದ ಬಗ್ಗೆ ಎನ್ಐಎ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.
ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಸಲ್ಲಿಸಿದ ಅರ್ಜಿಯ ಮೇರೆಗೆ ತನಿಖೆಯನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ಎನ್ಐಎಗೆ ವರ್ಗಾಯಿಸಲು ಹೈಕೋರ್ಟ್ ಆದೇಶಿಸಿದೆ. ಎರಡು ವಾರಗಳಲ್ಲಿ ಎಲ್ಲಾ ದಾಖಲೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ.
“ಇಲ್ಲಿ ತನಿಖೆ ನಡೆದರೆ, ಅವರು ಸಿಕ್ಕಿಬೀಳುತ್ತಾರೆ ಎಂದು ಅವರಿಗೆ ತಿಳಿದಿದೆ. ಆದ್ದರಿಂದ ಬಿಜೆಪಿ, ವಿಚಾರಣೆಯನ್ನು ತಪ್ಪಿಸಲು ಎನ್ಐಎ ತನಿಖೆಯನ್ನು ಕೋರಿ ಹೈಕೋರ್ಟ್ ಅನ್ನು ಸಂಪರ್ಕಿಸಿದೆ” ಎಂದು ಈ ಹಿಂದೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದರು.
ಮೆರವಣಿಗೆ ವೇಳೆ ಬಿಜೆಪಿ ಕೋಮುಗಲಭೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದು, ಸಂಘರ್ಷಗಳನ್ನು ಸಂಘಟಿಸಲು ಬಿಜೆಪಿ ಇತರ ರಾಜ್ಯಗಳಿಂದ ಗೂಂಡಾಗಳನ್ನು ನೇಮಿಸಿಕೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.