Home ಟಾಪ್ ಸುದ್ದಿಗಳು ಮಂಗಳೂರು | ಸಲೂನ್ ಮೇಲೆ ದಾಳಿ ಪ್ರಕರಣ: ಪ್ರಸಾದ್ ಅತ್ತಾವರ ಬಂಧನ

ಮಂಗಳೂರು | ಸಲೂನ್ ಮೇಲೆ ದಾಳಿ ಪ್ರಕರಣ: ಪ್ರಸಾದ್ ಅತ್ತಾವರ ಬಂಧನ

ಮಂಗಳೂರು: ಬಿಜೈಯ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದಾಳಿ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಗೃಹ ಸಚಿವ ಜಿ ಪರಮೇಶ್ವರ್ ಸೂಚನೆ ನೀಡಿದ ಬೆನ್ನಲ್ಲೆ ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ನಗರದ ಸಲೂನ್ ಮೇಲೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರನನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಸಾದ್ ಅತ್ತವಾರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Join Whatsapp
Exit mobile version