ಅಯೋಧ್ಯೆಯ ರಾಮಮಂದಿರ 2023, ಡಿಸೆಂಬರ್ ನಿಂದ ದರ್ಶನಕ್ಕೆ ತೆರೆಯಲಿದೆ: ವಿಹಿಂಪ ಘೋಷಣೆ

Prasthutha|

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆ ನಗರದಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 2021 ರ ನವೆಂಬರ್ ನಲ್ಲಿ ಅಡಿಪಾಯ ಕಾಮಗಾರಿ ಪೂರ್ಣಗೊಳ್ಳಲಿದೆ. 2023 ರ ಡಿಸೆಂಬರ್ ನಿಂದ ಭಕ್ತರು ರಾಮನ ಆರಾಧನೆ ಮಾಡಬಹುದಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಘೋಷಿಸಿದೆ.

- Advertisement -

ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ವಹಿಸಿರುವ ವಿಶ್ವ ಹಿಂದೂ ಪರಿಷತ್ (ವಿ.ಎಚ್.ಪಿ) ಮುಖಂಡ ಗೋಪಾಲ್ ಅವರು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಪ್ರಸಕ್ತ ಗೋಪಾಲ್ ಅವರು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಎಂಬವರ ಆಪ್ತರಾಗಿದ್ದಾರೆ.

2024 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ, ವಿಹಿಂಪ ಮೂಲಕ ಈ ಹೇಳಿಕೆಯನ್ನು ಹೊರಡಿಸಿದೆ ಎಂದು ಹೇಳಲಾಗಿದೆ.

Join Whatsapp