ಮುಂಬೈ: ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೆರವೇರಿಸಬೇಕು ಎಂದು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಇದು “ರಾಷ್ಟ್ರೀಯ ಹೆಮ್ಮೆಯ ವಿಷಯ ಮತ್ತು ದೇಶದ ಸ್ವಾಭಿಮಾನ” ಎಂದು ಅವರು ತಿಳಿಸಿದ್ದಾರೆ.
ಜನವರಿ 22 ರಂದು ಅಯೋಧ್ಯೆ ದೇವಾಲಯದ ಉದ್ಘಾಟನೆಯ ದಿನ ಮುರ್ಮು ಅವರನ್ನು ನಾಸಿಕ್‌ನ ಕಲಾರಾಮ್ ದೇವಾಲಯಕ್ಕೆ ಆಹ್ವಾನಿಸುತ್ತೇವೆ ಎಂದು ತಿಳಿಸಿದ್ದಾರೆ.