ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ !

Prasthutha|

ನವದೆಹಲಿ: ಅಯೋಧ್ಯೆಯಲ್ಲಿ 2024ರ ಜನವರಿ 1 ರಂದು ರಾಮಮಂದಿರವನ್ನು ಉದ್ಘಾಟಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ತ್ರಿಪುರಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

- Advertisement -

2024 ರಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಇದೇ ವೇಳೆ ದೇವಾಲಯದ ಉದ್ಘಾಟನೆ ಕೂಡ ನಡೆಯುವುದರಿಂದ ಬಿಜೆಪಿ ಮಂದಿರ ವಿಚಾರವಾಗಿ ಲಾಭ ಪಡೆದುಕೊಳ್ಳಲಿದೆ ಎನ್ನಲಾಗುತ್ತಿದೆ.

1990ರ ದಶಕದಲ್ಲಿ ಬಿಜೆಪಿಯ ಜನಪ್ರಿಯತೆಯ ಏರಿಕೆಗೆ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹೋರಾಟ ಕೂಡ ದೊಡ್ಡ ಕೊಡುಗೆ ನೀಡಿದೆ. ಇದನ್ನೇ 2024 ರ ಚುನಾವಣೆಯಲ್ಲಿ ಬಳಸಿಕೊಳ್ಳಲು ಬಿಜೆಪಿ ಯೋಜಿಸುತ್ತಿದೆ. ಅಯೋಧ್ಯೆಯ ಬಾಬರಿ ಮಸೀದಿ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ತೀವ್ರ ಪ್ರಗತಿಯಲ್ಲಿದೆ.

Join Whatsapp