ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

Prasthutha|

ಬಿಹಾರದ ಸಂಸದ ಹಾಗೂ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ನಿಧನರಾಗಿದ್ದಾರೆ. ಅವರು ಎಲ್ ಜೆ ಪಿ ಪಕ್ಷದ ಸಂಸ್ಥಾಪಕರಾಗಿದ್ದಾರೆ.  ಅವರ ಮಗ ಚಿರಾಗ್ ಪಾಸ್ವಾ ಈ ಕುರಿತು ಟ್ವೀಟ್ ಮಾಡಿದ್ದಾರೆ.  ವಾರದ ಹಿಂದೆ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು.

ರಾಮ್ ವಿಲಾಸ್ ಪಾಸ್ವಾನ್ ಕೇಂದ್ರ ಸಚಿವ ಸಂಪುಟದಲ್ಲಿ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು ಮತ್ತು ಹಾಲಿ ರಾಜ್ಯಸಭಾ ಸದಸ್ಯರಾಗಿದ್ದಾರೆ.

- Advertisement -