ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ: ಎನ್ ಸಿಪಿ ನಾಯಕ

Prasthutha|

►‘ರಾಮ ‘ಬಹುಜನ’ರಿಗೆ ಸೇರಿದವನು’

- Advertisement -

ನವದೆಹಲಿ: ಭಗವಾನ್ ರಾಮ ‘ಬಹುಜನ’ರಿಗೆ ಸೇರಿದವನು. ರಾಮ ಮಾಂಸಾಹಾರಿಯಾಗಿದ್ದ ಎಂದು ಎನ್ ಸಿಪಿ ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್ ಹೇಳಿದ್ದಾರೆ.

ಜನವರಿ 22 ರಂದು ಅಯೋಧ್ಯೆಯ ಪವಿತ್ರೀಕರಣ ಸಮಾರಂಭದ ದಿನದಂದು ಒಂದು ದಿನದ ಮದ್ಯ ಮತ್ತು ಮಾಂಸವನ್ನು ನಿಷೇಧಿಸುವಂತೆ ಬಿಜೆಪಿ ಶಾಸಕ ರಾಮ್ ಕದಮ್ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಜಿತೇಂದ್ರ ಈ ಹೇಳಿಕೆ ನೀಡಿದ್ದಾರೆ.

- Advertisement -

ರಾಮ ನಮ್ಮವನು. ರಾಮ ಬಹುಜನರಿಗೆ ಸೇರಿದವನು. ಬೇಟೆಯಾಡಿ ತಿನ್ನುವ ರಾಮ ನಮ್ಮವನು, ನಾವು ಬಹುಜನರಿಗೆ ಸೇರಿದವರು. ನೀವು ನಮ್ಮೆಲ್ಲರನ್ನು ಸಸ್ಯಾಹಾರಿಯನ್ನಾಗಿ ಮಾಡಲು ಹೋದಾಗ, ನಾವು ರಾಮನ ಆದರ್ಶಗಳನ್ನು ಅನುಸರಿಸುತ್ತೇವೆ. ಇಂದು ನಾವು ಕುರಿ ಮಾಂಸವನ್ನು ತಿನ್ನುತ್ತೇವೆ. ಇದು ರಾಮನ ಆದರ್ಶ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ ಎಂದು ತಿಳಿಸಿದ್ದಾರೆ.

Join Whatsapp