Home ಟಾಪ್ ಸುದ್ದಿಗಳು ಮಂಗಳೂರು | ರಾಮನ ಬಗ್ಗೆ ಅವಹೇಳನ ಆರೋಪ: ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರು | ರಾಮನ ಬಗ್ಗೆ ಅವಹೇಳನ ಆರೋಪ: ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರು: ರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.

ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಂಘಪರಿವಾರದ ಕಾರ್ಯಕರ್ತರು ಜಮಾವಣೆಗೊಂಡಿದ್ದರು.

ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು.

Join Whatsapp
Exit mobile version