ಡಿ.ಜೆ.ಹಳ್ಳಿ-ಕೆ.ಜಿ ಹಳ್ಳಿ ಗಲಭೆಗೆ ಪೊಲೀಸ್ ವೈಫಲ್ಯವೇ ಕಾರಣ: ರಾಮಲಿಂಗ ರೆಡ್ಡಿ

Prasthutha|

ಬೆಂಗಳೂರು: ಡಿ.ಜೆ.ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಪ್ರಮುಖ ಕಾರಣ ಪೊಲೀಸ್ ವೈಫಲ್ಯ. ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ನವೀನ್ ನನ್ನು ತಕ್ಷಣವೇ ಬಂಧಿಸಿದ್ದರೆ ಈ ಗಲಭೆ ನಡೆಯುತ್ತಿರಲಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

“ಪ್ರಕರಣದಲ್ಲಿ ಬಿಜೆಪಿ ಸರಕಾರವು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ. ಸಂಪತ್ ರಾಜ್ ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಲಿ. ಅದು ಬಿಟ್ಟು ಕಾಂಗ್ರೆಸ್ ಮೇಲೆ ಆರೋಪ ಹೊರಿಸುವುದು ತಪ್ಪು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.  

- Advertisement -

“ಪೊಲೀಸರು ಪ್ರಕರಣವನ್ನು ಸರಿಯಾಗಿ ನಿರ್ವಹಿಸಿದ್ದರೆ ಗಲಭೆ ನಡೆಯುತ್ತಿರಲಿಲ್ಲ. ನವೀನ್ ನನ್ನು ಆಗಲೇ ಬಂಧಿಸಿದ್ದರೆ ಘಟನೆ ನಡೆಯುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

- Advertisement -