ಮಂಗಳೂರು: ರಾಜ್ಯ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಮತೀಯವಾದ ಬಿತ್ತಿ ದ.ಕ ಜಿಲ್ಲೆಯಲ್ಲಿ ಸಂಘಪರಿವಾರ ಅನೈತಿಕ ಪೊಲೀಸ್ ಗಿರಿ ನಡೆಸುತ್ತಿದೆ. ಬಿಜೆಪಿಯವರು ಕೇವಲ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರ ಸಮಸ್ಯೆಗಳನ್ನು ಮರೆಮಾಡಲಾಗುತ್ತಿದೆ. ಇದಕ್ಕೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 100 ದಿವಸಗಳಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತೇನೆ ಎಂದು ಹೇಳಿದ್ದ ಮೋದಿ, ಇದೀಗ ದಿನೆ ದಿನೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷದ ಮುಖಂಡರು, ಸಚಿವರು ಬೆಲೆ ಏರಿಕೆ ಸಮಸ್ಯೆ ಇಲ್ಲ. ಅವರು ಇದು ವಿರೋಧ ಪಕ್ಷಗಳ ಅಪಪ್ರಚಾರ ಎಂದು ಹೇಳುತ್ತಾರೆ. ಬಿಜೆಪಿಯವರದು ಕೈಲಾಗದವರ ಸರಕಾರ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಆಡಳಿತದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿ ಹೆಚ್ಚಾಗಿದೆ. ಇಲ್ಲಿ ನಿಜವಾದ ಸಮಸ್ಯೆ ನಿತ್ಯ ಬೆಲೆ ಏರಿಕೆಯಾಗಿದ್ದು, ದೀಪಾವಳಿಯ ಸಂದರ್ಭದಲ್ಲೂ ಬೆಲೆ ಏರಿಕೆ ಮಾಡಿ ಜನರು ಸಂಭ್ರಮ ಪಡದಂತೆ ಮಾಡಿದ್ದಾರೆ ಎಂದು ಹೇಳಿದರು.
ಉಪ ಚುನಾವಣೆಯಲ್ಲಿ ಒಟ್ಟಾರೆ ಕಾಂಗ್ರೆಸ್ಗೆ ಲಾಭವಾಗಿದೆ. ಬಿಜೆಪಿಯ ವೈಫಲ್ಯ ಇದಕ್ಕೆ ಕಾರಣ ಎಂದೂ ರೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಭಾಸ್ಕರ ಮೊಯ್ಲಿ, ಹರಿನಾಥ್, ಶಶಿಧರ ಹೆಗ್ಡೆ, ಶಾಲೆಟ್ ಪಿಂಟೊ, ಅಪ್ಪಿ, ಗಣೇಶ ಪೂಜಾರಿ, ನೀರಜ್ ಪಾಲ್, ನಜೀರ್ ಬಜಾಲ್, ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು