ಮಂಗಳೂರು: ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪರನ್ನು ವಜಾ ಮಾಡುವುದು ಮಾತ್ರವಲ್ಲ, ಕೊಲೆ ಆರೋಪ ಹೊರಿಸಿ ಜೈಲಿಗೆ ಅಟ್ಟಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದ್ದಾರೆ.
ಈ ಬಗ್ಗೆ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಈಶ್ವರಪ್ಪನವರು ಶೇ. 40 ಕಮೀಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಡೆತ್ ನೋಟ್ ನಲ್ಲಿಯೂ ಈಶ್ವರಪ್ಪರ ಹೆಸರನ್ನು ಹೇಳಿಕೊಂಡಿದ್ದಾರೆ. ಆತ್ಮಹತ್ಯೆ ಮಾಡುವವರು ಡೆತ್ ನೋಟ್ ನಲ್ಲಿ ಸುಳ್ಳು ಹೇಳುವುದಿಲ್ಲ. ಅವರ ಮೇಲೆ ಕೊಲೆ ಆರೋಪ ಹೊರಿಸಿ ಜೈಲಿಗಟ್ಟಬೇಕು ಎಂದು ಹೇಳಿದರು.