‘ಮನುಸ್ಮೃತಿ’ಯಂತೆ ‘ರಾಮಚರಿತಮಾನಸ’ವನ್ನು ಸುಡಬೇಕು: ಬಿಹಾರ ಶಿಕ್ಷಣ ಸಚಿವ

Prasthutha|

ಪಾಟ್ನಾ: ‘ಮನುಸ್ಮೃತಿ’ಯಂತೆ ‘ರಾಮಚರಿತಮಾನಸ’ವನ್ನು ಕೂಡ ಸುಡಬೇಕು ಅದು ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದೆ ಎಂದು ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಹೇಳಿದ್ದಾರೆ.

- Advertisement -


ಬುಧವಾರ ಪಾಟ್ನಾದ ಬಾಪು ಸಭಾಂಗಣದಲ್ಲಿ ನಡೆದ ನಳಂದ ಮುಕ್ತ ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಮಚರಿತಮಾನಸವು ಸಮಾಜದಲ್ಲಿ ದ್ವೇಷವನ್ನು ಹರಡುವ ಪುಸ್ತಕವಾಗಿದೆ. ಇದು ಸಮಾಜದಲ್ಲಿ ದಲಿತರು, ಹಿಂದುಳಿದವರು ಮತ್ತು ಮಹಿಳೆಯರು ಶಿಕ್ಷಣ ಸೇರಿದಂತೆ ಇತರೆ ಹಕ್ಕುಗಳನ್ನು ಪಡೆಯುವುದನ್ನು ತಡೆಯುತ್ತದೆ. ಮನುಸ್ಮೃತಿ ಸಮಾಜದಲ್ಲಿ ದ್ವೇಷದ ಬೀಜಗಳನ್ನು ಬಿತ್ತಿತ್ತು. ರಾಮಚರಿತಮಾನಸ ಸಹ ಸಮಾಜದಲ್ಲಿ ದ್ವೇಷವನ್ನು ಹುಟ್ಟುಹಾಕುತ್ತಿದೆ ಎಂದರು.


ಗೋಳ್ವಾಲ್ಕರ್ ಅವರ ಚಿಂತನೆಗಳು ಸಮಾಜದಲ್ಲಿ ದ್ವೇಷದ ಭಾವನೆಗಳನ್ನು ಹರಡುತ್ತಿವೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟರು. ಏಕೆಂದರೆ, ಅದು ದಲಿತರು ಮತ್ತು ಹಿಂದುಳಿದವರ ಹಕ್ಕುಗಳನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತದೆ ಎಂದು ಸಚಿವರು ಹೇಳಿದರು.



Join Whatsapp