ಮುಸ್ಲಿಮರ ವಿರುದ್ಧ ದ್ವೇಷಭಾಷಣ: ವಿಚಾರಣೆಗೆ ಹಾಜರಾಗಲು ಬಾಬಾ ರಾಮ್ ದೇವ್‌ ಗೆ ಹೈಕೋರ್ಟ್ ಸೂಚನೆ

Prasthutha|

- Advertisement -

ಜೈಪುರ: ಮುಸ್ಲಿಮರ ವಿರುದ್ಧ ದ್ವೇಷಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್ ದೇವ್‌ ಗೆ ಅಕ್ಟೋಬರ್ 5ರಂದು ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ.

ವಿಚಾರಣೆಗಾಗಿ ತನಿಖಾಧಿಕಾರಿಗಳು ಕರೆದಾಗಲೆಲ್ಲ ಬಾಬಾ ರಾಮ್ ದೇವ್ ಹಾಜರಾಗಬೇಕು ಎಂದು ನ್ಯಾಯಮೂರ್ತಿ ಕುಲದೀಪ್ ಮಾಥುರ್ ಅವರಿದ್ದ ನ್ಯಾಯಪೀಠ ಸೂಚನೆ ನೀಡಿದ್ದು, ಜೊತೆಗೆ ಅವರ ಬಂಧನಕ್ಕೆ ಏಪ್ರಿಲ್ 13ರಂದು ವಿಧಿಸಿದ್ದ ತಡೆಯಾಜ್ಞೆಯನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಿದೆ.

Join Whatsapp