ತಪ್ಪು ಜಾಹೀರಾತು: ಬಾಬಾ ರಾಮ್ ದೇವ್, ಪತಂಜಲಿ ಮುಖ್ಯಸ್ಥನಿಗೆ ಸುಪ್ರೀಂ ಸಮನ್ಸ್

Prasthutha|

ನವದೆಹಲಿ: ಬಾಬಾ ರಾಮ್ದೇವ್ ಮತ್ತು ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಶೋಕಾಸ್ ನೋಟಿಸ್ ಗೆ ಉತ್ತರ ನೀಡದ ಹಿನ್ನೆಲೆ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

- Advertisement -

ತಪ್ಪು ಮಾಹಿತಿಯೊಂದಿಗೆ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿ ಪತಂಜಲಿ ವಿರುದ್ಧ ಭಾರತೀಯ ವೈದ್ಯಕೀಯ ಸಂಸ್ಥೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹಿಮಕೊಹ್ಲಿ ನೇತೃತ್ವದ ದ್ವಿ ಸದಸ್ಯ ಪೀಠ, ರಾಮ್ದೇವ್ ಮತ್ತು ಪತಂಜಲಿ ಅಧ್ಯಕ್ಷ ಆಚಾರ್ಯ ಬಾಲಕೃಷ್ಣ ಅವರು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ, 1954 ರ ಸೆಕ್ಷನ್ 3 ಮತ್ತು 4 ಅನ್ನು ಪ್ರಾಥಮಿಕವಾಗಿ ಉಲ್ಲಂಘಿಸಿದ್ದಾರೆ ಎಂದು ಟೀಕಿಸಿತ್ತು. ತಾತ್ಕಾಲಿಕವಾಗಿ ಪತಂಜಲಿ ಜಾಹೀರಾತು ನಿರ್ಬಂಧಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.

ಆದರೆ ಸುಪ್ರೀಂಕೋರ್ಟ್ ನೋಟಿಸ್ ಗೆ ಉತ್ತರಿಸದ ಹಿನ್ನೆಲೆ ಸುಪ್ರೀಂಕೋರ್ಟ್ ಗರಂ ಆಗಿದೆ. ನಮ್ಮ ಆದೇಶಗಳನ್ನು ನಿರ್ಲಕ್ಷಿಸಿದ್ದೀರಿ. ಈ ಹಿನ್ನಲೆ ಬಾಬಾ ರಾಮ್ದೇವ್ ಮತ್ತು ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಕೋರ್ಟ್ ಮುಂದೆ ಹಾಜರಾಗಬೇಕು ಎಂದು ಸೂಚಿಸಿದೆ.



Join Whatsapp