Home ಟಾಪ್ ಸುದ್ದಿಗಳು ಭಾಗ್ಯಲಕ್ಷ್ಮಿ ಯೋಜನೆಯ ಹಗರಣವನ್ನು SITಗೆ ನೀಡಿ: ಸಿಎಂಗೆ ರಮೇಶ್‌ ಬಾಬು ಆಗ್ರಹ

ಭಾಗ್ಯಲಕ್ಷ್ಮಿ ಯೋಜನೆಯ ಹಗರಣವನ್ನು SITಗೆ ನೀಡಿ: ಸಿಎಂಗೆ ರಮೇಶ್‌ ಬಾಬು ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಮತ್ತೊಂದು ಹಗರಣ ಮುನ್ನಲೆಗೆ ಬಂದಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿರುವುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಬಹಿರಂಗಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 2011 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಅಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿದೆ. ಸುಮಾರು 10 ಲಕ್ಷ ಸೀರೆಗಳನ್ನು ಹಂಚಿಕೆ ಮಾಡಲಾಗಿತ್ತು. ರೂ.100 ಮುಖಬೆಲೆಯ ಸೀರೆಗಳಿಗೆ ಹೆಚ್ಚು ಬೆಲೆ ಕೊಟ್ಟು ಸೂರತ್ ಇಂದ ತರಿಸಲಾಗಿತ್ತು. ಈ ಹಗರಣದ ಬಗ್ಗೆ ವಿಧಾನ ಪರಿಷತ್ ಅಲ್ಲಿ ಮೋಟಮ್ಮ ಅವರು ವಿರೋಧ ಪಕ್ಷದ ನಾಯಕರಾಗಿ ಇದ್ದಾಗ ಈ ವಿಚಾರದ ಬಗ್ಗೆ ಚರ್ಚೆಯಾಗಿದೆ. ಸದಸ್ಯರಾಗಿದ್ದ ಯು. ಬಿ. ವೆಂಕಟೇಶ್ ಅವರು ಹಾಗೂ ದಯಾನಂದ ಅವರು ಇದರ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದ್ದರು. ಈ ಹಗರಣದ ಬಗ್ಗೆ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ರಾಜಸ್ಥಾನದಿಂದ ಬಂದಿರುವ ಲೆಹರ್ ಸಿಂಗ್ ಅವರು ನಮ್ಮ ಕರ್ನಾಟಕದ ಹಿತ ಕಾಪಾಡುತ್ತಾರೋ ಅಥವಾ ರಾಜಸ್ಥಾನದ ಹಿತ ಕಾಪಾಡುತ್ತಾರೋ ನೋಡಬೇಕು. ಅಕ್ರಮಗಳ ಬಗ್ಗೆ ಮಾತನಾಡುವ ಅವರು ಈ ಸೀರೆ ಹಗರಣದ ಬಗ್ಗೆ ದನಿ ಎತ್ತಬೇಕು, ತನಿಖೆ ನಡೆಸಿ ಎಂದು ಸಿಎಂಗೆ ಪತ್ರ ಬರೆಯಬೇಕು ಎಂದು ತಿಳಿಸಿದರು.

Join Whatsapp
Exit mobile version