ರಾಸಲೀಲೆ CD | ವೀಡಿಯೋ ಅಪ್ಲೋಡ್ ಮಾಡಿದವರ ಪತ್ತೆಗೆ ಮುಂದಾದ ಪೊಲೀಸರು!

Prasthutha|

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ಬಿಡುಗಡೆ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಸಂತ್ರಸ್ತೆಯ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ, ಇನ್ನೊಂದು ಕಡೆ ಪೊಲೀಸರು ರಮೇಶ್ ಜಾರಕಿಹೊಳಿ ವಿಡಿಯೋ ಹಿಂದೆ ಬಿದ್ದಿದ್ದಾರೆ.

- Advertisement -

ಸಚಿವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರು ಯಾರು? ಆ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ಸರ್ಕಾರ ಪೊಲೀಸರಿಗೆ ಸೂಚನೆ ನೀಡಿದೆ.

ವೈರಲ್ ಆಗಿರುವ ವಿಡಿಯೋ ಮೂಲ ಪತ್ತೆಗಾಗಿ ಹುಡುಕಾಟ ನಡೆಯುತ್ತಿದ್ದು, ಮೂಲಗಳ ಪ್ರಕಾರ ಖಾಸಗಿ ವೆಬ್ ಸೈಟ್ ನಲ್ಲಿ ರಷ್ಯಾದಿಂದ ವೀಡಿಯೋ ಅಪ್ ಲೋಡ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ವೀಡಿಯೋ ಅಪ್ಲೋಡ್ ಮಾಡಿದವರನ್ನು ಪತ್ತೆ ಹಚ್ಚಲು ಪೊಲೀಸರು ಈಗಾಗಲೇ ಹುಡುಕಾಟದ ಆರಂಭಿಸಿದ್ದಾರೆ.

- Advertisement -