ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್​.. ಕೆಲವು ದಿನಗಳವರೆಗೆ ಹೋಂ ಕ್ವಾರಂಟೈನ್

Prasthutha|

ಕೊರೊನಾ ಸೋಂಕಿಗೆ ಒಳಗಾಗಿ ಗೋಕಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ರಮೇಶ್​ ಜಾರಕಿಹೊಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಹೋಂ ಕ್ವಾರಂಟೈನ್​​ಗೆ ಒಳಗಾಗಿದ್ದಾರೆ.

- Advertisement -

ನಿನ್ನೆ ಮಧ್ಯಾಹ್ನದಿಂದಲೂ ರಮೇಶ್ ಜಾರಕಿಹೊಳಿ ಆರೋಗ್ಯ ಸ್ಥಿರವಾಗಿದ್ದರಿಂದ ಇವತ್ತು ಬಿಡುಗಡೆ ಮಾಡಲಾಗಿದೆ ಎಂದು ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್, ಡಾ. ಶಾಂತಾ ಮತ್ತು ಡಾ. ಮಹೇಶ ಕೋಣಿ ತಿಳಿಸಿದ್ದಾರೆ.

ಅಲ್ಲದೇ ಮುಂದಿನ 7 ದಿನಗಳ ಕಾಲ ಮನೆಯಲ್ಲಿಯೇ ಮಾಜಿ ಸಚಿವರು ವೈದ್ಯರ ಉಸ್ತುವಾರಿಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಯಾವುದೇ ಸಮಸ್ಯೆಯಾದರು ವೈದ್ಯರ ಗಮನಕ್ಕೆ ತರುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

- Advertisement -