ಕೊರೊನಾ ಸೋಂಕಿಗೆ ಒಳಗಾಗಿ ಗೋಕಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ರಮೇಶ್ ಜಾರಕಿಹೊಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ನಿನ್ನೆ ಮಧ್ಯಾಹ್ನದಿಂದಲೂ ರಮೇಶ್ ಜಾರಕಿಹೊಳಿ ಆರೋಗ್ಯ ಸ್ಥಿರವಾಗಿದ್ದರಿಂದ ಇವತ್ತು ಬಿಡುಗಡೆ ಮಾಡಲಾಗಿದೆ ಎಂದು ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್, ಡಾ. ಶಾಂತಾ ಮತ್ತು ಡಾ. ಮಹೇಶ ಕೋಣಿ ತಿಳಿಸಿದ್ದಾರೆ.
ಅಲ್ಲದೇ ಮುಂದಿನ 7 ದಿನಗಳ ಕಾಲ ಮನೆಯಲ್ಲಿಯೇ ಮಾಜಿ ಸಚಿವರು ವೈದ್ಯರ ಉಸ್ತುವಾರಿಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಯಾವುದೇ ಸಮಸ್ಯೆಯಾದರು ವೈದ್ಯರ ಗಮನಕ್ಕೆ ತರುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.