ಸಂತ್ರಸ್ತೆ ಯುವತಿಗೆ ರಮೇಶ್‌ ಜಾರಕಿಹೊಳಿ ಬೆದರಿಕೆ ಹಾಕುತ್ತಿದ್ದಾರೆ: ಸಂತ್ರಸ್ತೆ ಪರ ವಕೀಲ ಹೇಳಿಕೆ

Prasthutha: March 27, 2021

ಬೆಂಗಳೂರು: ಸೆಕ್ಸ್ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿಗೆ ಅಧಿಕಾರವನ್ನು ದುರ್ಬಳಕೆ ಮಾಡಿ ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಯು ಯುವತಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಪರ ವಕೀಲರಾದ ಜಗದೀಶ್ ಮಹಾದೇವ್ ಹೇಳಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿರುವ ಜಗದೀಶ್ ಮಹಾದೇವ್, ಆರೋಪಿಯ ವಿರುದ್ಧ ಕಠಿಣವಾದ ಸೆಕ್ಷನ್ ಹಾಕಿರುವುದರಿಂದ ಮಾಧ್ಯಮದ ಮೂಲಕ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ತಕ್ಷಣ ಅದನ್ನು ಅವರು ನಿಲ್ಲಿಸಬೇಕು. ಅದೇ ರೀತಿ ಪೊಲೀಸ್ ಇಲಾಖೆಯಿಂದ ಸಕರಾತ್ಮಕ ಪ್ರತಿಕ್ರಿಯೆ ದೊರಕಬೇಕಿತ್ತು. ಆದರೆ ಯಾವುದೂ ದೊರೆತಿಲ್ಲ. ಸೋಮವಾರದವರೆಗೆ ನಾವು ನೋಡುತ್ತೇವೆ. ಅಲ್ಲಿ ತನಕವೂ ನಮಗೆ ಸರಿಯಾದ ಪ್ರತಿಕ್ರಿಯೆ ಬರದಿದ್ದರೆ ನಾವು ಹೈಕೋರ್ಟ್ ಮೋರೆ ಹೋಗುವ ಬಗ್ಗೆ ಚಿಂತನೆ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!