ಮೋದಿ ಯಾವ ಮುಖ ಹೊತ್ತು ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡುತ್ತಾರೆ: ರಮೇಶ್ ಕಾಂಚನ್

Prasthutha|

ಉಡುಪಿ: ಕೇರಳ ರಾಜ್ಯದ ಗಣರಾಜ್ಯೋತ್ಸವ ಪರೇಡ್ ಸಮಯದಲ್ಲಿ ಸಮಾನತೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ನಿರಾಕರಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರು ಯಾವ ಮುಖವನ್ನು ಹೊತ್ತು ಭಾನುವಾರ ಮಂಗಳೂರಿನ ಲೇಡಿಹಿಲ್ ಸರ್ಕಲ್‌ನಲ್ಲಿ ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡುತ್ತಾರೆ ಇದೊಂದು ಕೇವಲ ಬಿಲ್ಲವ ಸಮುದಾಯವನ್ನು ಒಲೈಸಲು ಮಾಡುತ್ತಿರುವ ವೋಟ್ ಬ್ಯಾಂಕ್ ಗಿಮಿಕ್ ಅಲ್ಲದೆ ಬೇರೆ ಏನೂ ಅಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಹಿಂದೆ ರಾಜ್ಯದಲ್ಲಿದ್ದ ಬಿಜೆಪಿ ಸರಕಾರವಾಗಲಿ ಅಥವಾ ಕೇಂದ್ರದ ಮೋದಿ ಸರಕಾರವಾಗಲಿ ನಿರಂತರವಾಗಿ ಬಿಲ್ಲವ ಸಮುದಾಯಕ್ಕೆ ಅವಮಾನ ಮಾಡಿಕೊಂಡೇ ಬಂದಿದ್ದು ಕಳೆದ ಬಾರಿ ರಾಷ್ಟ್ರದ ಗಣರಾಜ್ಯೋತ್ಸವ ಪರೇಡ್ ವೇಳೆ ಕೇರಳ ಸರಕಾರ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ‌ವನ್ನು ಕೇಂದ್ರ ಸರಕಾರ ನಿಷೇಧಿಸಿತ್ತು. ಈ ವೇಳೆ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳನ್ನು ಪರಿಪರಿಯಾಗಿ ಬೇಡಿಕೊಂಡರೂ ಕೂಡ ಟ್ಯಾಬ್ಲೋಗೆ ಅವಕಾಶ ನಿರಾಕರಣೆ ಮಾಡುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನಿಸದ್ದರು.

ಈ ಹಿಂದೆ ರಾಜ್ಯದಲ್ಲಿ ಅಧಿಕಾರಲ್ಲಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಕೂಡ ಪಠ್ಯಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣಗುರುಗಳ ವಿಚಾರವನ್ನು ತೆಗೆಯಲು ಶಿಫಾರಸು ಮಾಡಿದಾಗ ಕೂಡ ಯಾವುದೇ ರೀತಿಯ ಪ್ರತಿಕ್ರಿಯೆ ಬಿಜೆಪಿ ಸರಕಾರದಿಂದ ಬಂದಿರಲಿಲ್ಲ. ಬಿಲ್ಲವ ಸಮುದಾಯದಿಂದ ಮಂತ್ರಿಯಾಗಿದ್ದ ಪ್ರಸ್ತುತ ಉಡುಪಿ-ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿಯವರು ಕೂಡ ಈ ಬಗ್ಗೆ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸದೆ ಈಗ ನಾನು ಬಿಲ್ಲವ ಸಮುದಾಯದ ಅಭ್ಯರ್ಥಿ ಎಂದು ಜಾತಿ ಕಾರ್ಡ್ ಬಳಸಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.



Join Whatsapp