ರಾಮೇಶ್ವರಂ ಕೆಫೆ ಬ್ಲಾಸ್ಟ್: BMTC ಬಸ್ ನಲ್ಲಿ ಪ್ರಯಾಣಿಸಿದ್ದ ಆರೋಪಿಯ ಮತ್ತೊಂದು ಫೋಟೋ ರಿವೀಲ್

Prasthutha|

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದ ಬಾಂಬರ್‌ನ ಮತ್ತೊಂದು ಫೋಟೋ ರಿವೀಲ್ ಆಗಿದೆ.

- Advertisement -

ಮಾರ್ಚ್ 1ರಂದು 11:45 ಕ್ಕೆ ಅರೋಪಿ ಬಸ್ ಹತ್ತಿದ್ದಾನೆ ಎಂದು ಹೇಳಲಾಗಿದ್ದು, ಬಸ್ ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.

ಎಲ್ಲಾ ಸಾಕ್ಷಿಗಳನ್ನು ಇಟ್ಟುಕೊಂಡು ಪೊಲೀಸರು ಹಾಗೂ ಎನ್ ಐ ಎ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.

- Advertisement -

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಶೀಘ್ರ ಬಂಧಿಸುವ ಭರವಸೆ ನೀಡಿದೆ.



Join Whatsapp