Home ಟಾಪ್ ಸುದ್ದಿಗಳು ರಾಮೇಶ್ವರಂ ಕೆಫೆ ಸ್ಫೋಟ: ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ

ರಾಮೇಶ್ವರಂ ಕೆಫೆ ಸ್ಫೋಟ: ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಇನ್ನೂ ಪತ್ತೆಯಾಗಿಲ್ಲ. ಆರೋಪಿ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನು NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಆರೋಫಿ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.


ಸಿಸಿಬಿ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿದ್ದು, ಇದೀಗ ಆ ಫೋಟೋವನ್ನು ಎನ್ ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್ ಐಎ ಮನವಿ ಮಾಡಿದೆ. ಆರಂಭದಲ್ಲಿ ಪೊಲೀಸರು, ಎಲ್ಲಾ ಸಿಸಿಟಿಗಳ ಪರಿಶೀಲನೆ ಮಾಡಿದಾಗ ಆರೋಪಿ, ಕ್ಯಾಪ್, ಮಾಸ್ಕ್ ಚೆಸ್ಮಾ ಹಾಕಿರುವ ದೃಶ್ಯಗಳೇ ಸಿಕ್ಕಿದ್ದವು. ಆದ್ರೆ, ಸಿಸಿಬಿ ತನಿಖೆಯ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಒಂದು ಫೋಟೋವನ್ನು ಪತ್ತೆ ಮಾಡಿದೆ. ಇದೀಗ ಅದೇ ಫೋಟೋವನ್ನು ಎನ್ ಐಎ ಬಿಡುಗಡೆ ಮಾಡಿದೆ.

Join Whatsapp
Exit mobile version