ತಮಿಳುನಾಡಿನವರಿಂದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​: ಶೋಭಾಗೆ ಹೈಕೋರ್ಟ್​ ಪ್ರಶ್ನೆ..!

Prasthutha|

ಚೆನ್ನೈ: “ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದಾರೆ” ಎಂಬ ನಿಮ್ಮ ಹೇಳಿಕೆಗೆ ಏನು ಆಧಾರವಿದೆ ಎಂದು ಮದ್ರಾಸ್​​ ಹೈಕೋರ್ಟ್ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರು ಸಚಿವೆ​ ಶೋಭಾ ಕರಂದ್ಲಾಜೆ ಅವರಿಗೆ ಪ್ರಶ್ನಿಸಿದೆ.

- Advertisement -

ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್​ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಬಿಜೆಪಿ ಹಾಗೂ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಚಿವೆ ಶೋಭಾ ಕರಂದ್ಲಾಜೆ, “ತಮೀಳುನಾಡಿನಲ್ಲಿ ತರಬೇತಿ ಪಡೆಯುತ್ತಾರೆ, ಇಲ್ಲಿ (ಕರ್ನಾಟಕ)ಕ್ಕೆ ಬಂದು ಬಾಂಬ್​ ಇಡುತ್ತಾರೆ” ಎಂದು ಆರೋಪ ಮಾಡಿದ್ದರು.

ಈ ಹೇಳಿಕೆಯು ತಮಿಳುನಾಡಿನವರನ್ನು ಅವಮಾನಿಸುವಂತಹದ್ದು ಎಂಬ ಆಕ್ಷೇಪ ವ್ಯಕ್ತವಾಗಿತ್ತು. ಈ ಸಂಬಂಧ ಸಿ.ತ್ಯಾಗರಾಜನ್ ಎಂಬುವರು ಮಾರ್ಚ್ 20 ರಂದು ಮಧುರೈನ ಸೈಬರ್ ಕ್ರೈಂ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದರು. ಶೋಭಾ ಕರಂದ್ಲಾಜೆ ವಿರುದ್ಧ ಎಫ್​ಐಆರ್​​ ಬರೆಯಲಾಗಿದೆ. ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಶೋಭಾ ಕರಂದ್ಲಾಜೆ ಅವರು ಅರ್ಜಿ ಸಲ್ಲಿಸಿದರು.

- Advertisement -

ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಜಿ.ಜಯಚಂದ್ರನ್ ಬಾಂಬ್ ಇಟ್ಟವರು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದಾರೆ” ಎಂಬ ನಿಮ್ಮ ಹೇಳಿಕೆಗೆ ಏನು ಆಧಾರವಿದೆ ಎಂಬ ಪ್ರಶ್ನೆಯನ್ನು ಕೇಳಿದರು.



Join Whatsapp