ರಾಮನಗರ: 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Prasthutha|

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಆಪರೇಷನ್ ಹಸ್ತ ಆರಂಭಿಸಿದ್ದು, ಚನ್ನಪಟ್ಟಣ, ಮಾಗಡಿ, ಆನೇಕಲ್, ಕುಣಿಗಲ್ ಭಾಗದ ಜೆಡಿಎಸ್ ನ 300ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

- Advertisement -

ಎಲ್ಲರಿಗೂ ಕಾಂಗ್ರೆಸ್ ಶಾಲು ಹೊದಿಸಿ ಸ್ವತಃ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಗೆ ಬರಮಾಡಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕೆಲ ದಿನಗಳಿಂದ ಬೇರೆ ಬೇರೆ ಪಕ್ಷದ ಮುಖಂಡರು ಕಾಂಗ್ರೆಸ್ ಸೇರುತ್ತಲೇ ಇದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇರದ ಬೇರೆ ಬೇರೆ ಭಾಗದವರು ಸುಮಾರು 5000 ಮುಖಂಡರು ಕಾಂಗ್ರೆಸ್ ಗೆ ಬಂದಿದ್ದಾರೆ ಎಂದು ಹೇಳಿದ್ದಾರೆ.



Join Whatsapp